ಮಂಗಳೂರು: ಬಾಡಿಗೆ ಮನೆ ಖಾಲಿ ಮಾಡಿಸಲು ಮಧ್ಯಸ್ಥಿಕೆ ವಿಚಾರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಗಂಭೀರ ಹಲ್ಲೆಗೈದ ಘಟನೆ ನಗರ ಬಳಿಯ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ.
ಮೊಹಮ್ಮದ್ ಅನಾಸ್ ಎಂಬವರು ಮಾರಣಾಂತಿಕವಾಗಿ ಹಲ್ಲೆಗೊಳಗಾದವರು. ತಲವಾರು ಸಹಿತ ಮಾರಕಾಸ್ತ್ರಗಳಿಂದ ತಂಡವೊಂದು ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಚಾರು, ರವೂಫ್, ಅಕ್ಕಿ, ಮುಸ್ತಫಾ ಎಂಬವರು ಈ ಕೃತ್ಯ ಎಸಗಿದ್ದಾರೆ.
ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
Kshetra Samachara
02/02/2022 05:42 pm