ಕುಂದಾಪುರ: ಯುವತಿಯ ಜೊತೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ನಾಲ್ವರು ಯುವಕರು ಬಸ್ಸಿನಲ್ಲೇ ಹಲ್ಲೆ ನಡೆಸಿರುವ ಘಟನೆ ಕುಂದಾಪುರ ತಾಲೂಕಿನ ಹಾಲಾಡಿ ಸಮೀಪದ ಕಾಸಾಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಶಾಂಕ್ ಹಲ್ಲೆಗೊಳಗಾದ ಯುವಕ.
ಬೆಳಿಂಜೆ ನಿವಾಸಿ ಶಶಾಂಕ್ ಅವರು ಸ್ನೇಹಿತರಾದ ಪ್ರಜ್ವಲ್, ಗಣೇಶ್ ಜೊತೆ ಬಸ್ಸಿನಲ್ಲಿ ತೆರಳುತ್ತಿರುವಾಗ ನಾಲ್ವರ ತಂಡ ಏಕಾಏಕಿ ಗಲಾಟೆಗಿಳಿದಿದೆ. ಯುವತಿ ಜೊತೆ ಮಾತನಾಡಿದ್ದನ್ನು ಪ್ರಶ್ನಿಸಿ ಶಶಾಂಕ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ಮಾಡಿದವರ ಪೈಕಿ ಮೂವರು ಬಸ್ಸಿನಿಂದ ಇಳಿದು ಹೋಗಿದ್ದು ಓರ್ವ ಮಾತ್ರ ಕುಂದಾಪುರದವರೆಗೆ ಬಸ್ಸಿನಲ್ಲೇ ಬಂದಿದ್ದಾನೆ ಎನ್ನಲಾಗಿದೆ. ಗಾಯಾಳು ಯುವಕನಿಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯುವಕನ ಮೇಲಿನ ಹಲ್ಲೆ ಪ್ರಕರಣದ ಸಂಬಂಧ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು.
Kshetra Samachara
03/02/2022 06:48 pm