ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಪ್ರಾಪ್ತೆಯರು, ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ; ಮೂವರು ಆರೋಪಿಗಳು ವಶಕ್ಕೆ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರು ಸೇರಿದಂತೆ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ಪ್ರಕರಣವನ್ನು ‌ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರು ಮಹಿಳೆಯರು ಸೇರಿ ಓರ್ವ ಪುರುಷನನ್ನು ಅರೆಸ್ಟ್ ಮಾಡಿದ್ದಾರೆ.

ಶಮೀನಾ, ಆಯಿಷಮ್ಮ, ಸಫ್ವಾನ್ ಬಂಧಿತ ಆರೋಪಿಗಳು. ಪಿಯುಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತೆಯರು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿಗಳು ಮಂಗಳೂರಿನ ನಂದಿಗುಡ್ಡದ ರಿಯಾನಾ ರೆಸಿಡೆನ್ಸಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಆರೋಪಿಗಳು ಯುವತಿಯರಿಗೆ, ಅಪ್ರಾಪ್ತ ಬಾಲಕಿಯರಿಗೆ ಆಮಿಷವೊಡ್ಡಿ, ವೀಡಿಯೋ ದೃಶ್ಯಾವಳಿ ಇಟ್ಟುಕೊಂಡು ಯುವತಿಯರು, ಬಾಲಕಿಯರಿಗೆ ಬ್ಲಾಕ್ ಮೇಲ್ ಮಾಡಿ ವೇಶ್ಯಾವಾಟಿಕೆ ನಡೆಸಲು ಪ್ರಚೋದಿಸುತ್ತಿದ್ದರು.

ಅಪ್ರಾಪ್ತೆಯೋರ್ವಳ ಕಾಲೇಜು ಪ್ರಾಂಶುಪಾಲರಿಗೆ ಈ ವಿಚಾರ ತಿಳಿದು‌ ಅವರು ಚೈಲ್ಡ್ ಲೈನ್ ನವರ ಗಮನಕ್ಕೆ ತಂದಿದ್ದಾರೆ. ಅವರು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪೊಕ್ಸೊ ಕಾಯ್ದೆ, ಐ.ಟಿ.ಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.‌ ಹೆಚ್ಚಿನ ತನಿಖೆ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸಿಸಿಬಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಡಿ.ಸಿ.ಪಿ ಹರಿರಾಂ ಶಂಕರ್ ಮೇಲುಸ್ತುವಾರಿಯಲ್ಲಿ ತನಿಖೆಗೆ ಸೂಚನೆ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

04/02/2022 01:02 pm

Cinque Terre

10.23 K

Cinque Terre

3

ಸಂಬಂಧಿತ ಸುದ್ದಿ