ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹ ಸಮಾರಂಭದಂದು ಮುಸ್ಲಿಂ ವರನೊಬ್ಬ ಶ್ರೀ ಕೊರಗಜ್ಜ ದೈವದ ವೇಷ ಧರಿಸಿ, ಅವಹೇಳನ ಮಾಡಿದ್ದು ಕರಾವಳಿಯಾದ್ಯಂತದ ಭಕ್ತಾದಿಗಳಿಗೆ ನೋವಾಗಿತ್ತು ಹಾಗೂ ಭಾರಿ ಚರ್ಚೆಗೂ ಗ್ರಾಸವಾಗಿತ್ತು. ಇದೀಗ ಮದುಮಗನನ್ನು ಬಂಧಿಸಲಾಗಿದೆ ಎಂದು ದ.ಕ. ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ತಿಳಿಸಿದ್ದಾರೆ.
ಒಂದು ತಿಂಗಳಿಂದಲೂ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಾಷಿತ್, ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ಏರ್ ಪೋರ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಇದೀಗ ಬಾಷಿತ್ ನನ್ನು ವಿಟ್ಲ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
04/02/2022 01:46 pm