ಕುಂದಾಪುರ: ಅರಾಜಕತೆ ಮತ್ತು ಭಯದ ವಾತಾವರಣ ಸೃಷ್ಟಿಸುವ ಹುನ್ನಾರ ನಡೆಸಿ ಕುಂದಾಪುರ ಕಾಲೇಜು ಪರಿಸರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಮೂವರು ಪರಾರಿಯಾಗಿದ್ದಾರೆ. ಗಂಗೊಳ್ಳಿಯ ಅಬ್ದುಲ್ ಮಜೀದ್ (32) ಹಾಗೂ ರಜಬ್ (41) ಬಂಧಿತರಾಗಿದ್ದು, ಖಲೀಲ್, ರಿಜ್ವಾನ್ ಹಾಗೂ ಇಫ್ತಿಕಾರ್ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ಅಬ್ದುಲ್ ಮಜೀದ್ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ರೌಡಿ ಶೀಟರ್ ಆಗಿದ್ದಾನೆ.
ರಜಬ್ ವಿರುದ್ಧವೂ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಕುಂದಾಪುರ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Kshetra Samachara
06/02/2022 09:06 am