ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಗಂಭೀರ: ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಮ್ ಕಾಲೇಜ್ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ವೇಳೆ ರಸ್ತೆ ಬದಿಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸುತ್ತಿರುವ ಕಾಮಗಾರಿ ನಡೆಯುತಿದ್ದು ಇದೇ ವೇಳೆ ವಿದ್ಯುತ್ ಲೈನ್ ಆಫ್ ಮಾಡಲಾಗಿತ್ತು. ವಾಣಿಜ್ಯ ಬಳಕೆಯ ಇನ್ವಾಟರ್ ಅಥವಾ ಜನರೇಟರ್ ನಿಂದ ವಿದ್ಯುತ್ ಪ್ರವಹಿಸಿ ಗುತ್ತಿಗೆ ಕಂಪನಿಯ ನೌಕರನಾದ ಕೊಕ್ಕಡ ನಿವಾಸಿ ಆನಂದ ಅವರ ಮಗನಾದ ಮಿತಿಲೇಶ್(28) ಕಂಬದಲ್ಲಿ ಅಸ್ವಸ್ಥಗೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ.

ತಕ್ಷಣ ಗಾಯಾಳುವನ್ನು ಸ್ಥಳೀಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

06/02/2022 09:47 am

Cinque Terre

9.65 K

Cinque Terre

0