ಬೈಂದೂರು: ಬೈಂದೂರು ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ಸೇತುವೆಗೆ ಹಗ್ಗ ಬಿಗಿದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾರಾಯಣ ಚಂದನ್ (55) ಎಂಬವರು ರವಂತೆ ಮಹಾರಾಜ ವರಾಹ ದೇವಸ್ಥಾನ ಬಳಿಯ ರಾಷ್ಟ್ರೀಯ ಹೆದ್ದಾರಿ ಸೇತುವೆಗೆ ಹಗ್ಗ ಬಿಗಿದು ನೇಣು ಹಾಕಿಕೊಂಡವರು.
ನಾರಾಯಣ ಚಂದನ್ ಪತ್ರವೊಂದರಲ್ಲಿ ಮನೆಯ ವಿಳಾಸ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದರು.
Kshetra Samachara
07/02/2022 07:09 pm