ವಿಟ್ಲ: ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಮೇಲೆ ಕತ್ತಿಯಿಂದ ದಾಳಿ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.
ಸುಲೈಮಾನ್ ಎಂಬುವವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಳ ನೀರು ವ್ಯಾಪಾರ ಸುಲೈಮಾನ್ ಮನೆಯಲ್ಲಿ ಇರದಿರುವುದನ್ನು ಗಮನಿಸಿದ ದರೋಡೆಕೋರರು ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಬಂದು ಮಹಿಳೆಗೆ ಕತ್ತಿಯಿಂದ ಹಲ್ಲೆ ನಡೆಸಿ,ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
Kshetra Samachara
09/02/2022 04:59 pm