ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ದಾಂಪತ್ಯ ಕಲಹ: ವಲಸೆ ಕಾರ್ಮಿಕ ಆತ್ಮಹತ್ಯೆಗೆ ಶರಣು!

ಉಡುಪಿ: ವಲಸೆ ಕಾರ್ಮಿಕರೊಬ್ಬರು ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹನುಮಂತನಗರದಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿಯನ್ನು ವಿನೋದ್ (40) ಎಂದು ಗುರುತಿಸಲಾಗಿದೆ.

ವಿನೋದ್ ಮೂಲತಃ ವಿಜಯಪುರದ ನಿವಾಸಿ ಎಂದು ತಿಳಿದು ಬಂದಿದ್ದು ಇಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ದಾಂಪತ್ಯ ಕಲಹವು ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ರಾಜೇಶ್ ಬಿ. ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ವೈದ್ಯಕೀಯ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ಸಹಕರಿಸಿದರು.

Edited By : Shivu K
Kshetra Samachara

Kshetra Samachara

16/02/2022 04:44 pm

Cinque Terre

23.44 K

Cinque Terre

0

ಸಂಬಂಧಿತ ಸುದ್ದಿ