ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಪರಿಚಿತ ಮಹಿಳೆಯೊಂದಿಗೆ ಸಲುಗೆ, ಬ್ಲ್ಯಾಕ್ ಮೇಲ್; ಆರೋಪಿ ಕಂಬಿ ಹಿಂದೆ

ಬಂಟ್ವಾಳ: ಪರಿಚಿತ ಮಹಿಳೆಯರೊಂದಿಗೆ ಅತಿ ಸಲುಗೆಯಿಂದಿದ್ದು, ಬಳಿಕ ಅವರ ಚಿತ್ರಗಳನ್ನಿಟ್ಟು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಮಂಡಾಡಿ ಎಂಬಲ್ಲಿನ ರಾಧಾಕೃಷ್ಣ ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯೋರ್ವಳ ಖಾಸಗಿ ಪೋಟೋ ಗಳನ್ನು ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿ ಹಣಕ್ಕಾಗಿ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಿ ಮಹಿಳೆಯ ಪತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣ ಬೆನ್ನು ಹತ್ತಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿವಾಹಿತ ಮಹಿಳೆಯರನ್ನೇ ಗುರಿಯಾಗಿಸಿದ್ದ ಈ ಖತರ್ನಾಕ್, ಇಂಥ ಹಲವು ಕೃತ್ಯಗಳನ್ನು ಎಸಗಿರಬಹುದು ಎಂದು ಸಂಶಯಿಸಲಾಗಿದೆ.

ಆರೋಪಿ ಪತ್ತೆಗಾಗಿ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ನಿರ್ದೇಶನದಂತೆ, ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಾಟ್ ಮಾರ್ಗದರ್ಶನದಲ್ಲಿ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದಲ್ಲಿ ಎಸ್ ಐ ಅವಿನಾಶ್, ಸಿಬ್ಬಂದಿ ಗಣೇಶ್ ಪ್ರಸಾದ್, ನಾಗರಾಜ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Edited By :
Kshetra Samachara

Kshetra Samachara

18/02/2022 06:42 pm

Cinque Terre

6.82 K

Cinque Terre

1

ಸಂಬಂಧಿತ ಸುದ್ದಿ