ಮಲ್ಪೆ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲ್‌ಗೆ ತಡರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಹೋಟೆಲ್‌ನಲ್ಲಿದ್ದ ಸಹೋದರನಿಗೆ ಹಲ್ಲೆಗೈದು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿ 9:30ರ ಸುಮಾರಿಗೆ ಮಲ್ಪೆಯಲ್ಲಿ ಈ ಘಟನೆ ನಡೆದಿದೆ.
ಮಲ್ಪೆಯಲ್ಲಿರುವ ವಿದ್ಯಾರ್ಥಿನಿಯ ತಂದೆ ಹೈದರ್ ಅಲಿ ಎಂಬುವರಿಗೆ ಸೇರಿದ ಬಿಸ್ಮಿಲ್ಲಾ ಹೋಟೆಲ್‌ಗೆ ಆಗಮಿಸಿದ ಐವತ್ತಕ್ಕೂ ಹೆಚ್ಚು ಮಂದಿಯಿದ್ದ ಗುಂಪು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹೋಟೆಲ್‌ನ ಗಾಜುಗಳು ಪುಡಿಯಾಗಿದ್ದು, ಅಪಾರ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬಳಿಕ ದುಷ್ಕರ್ಮಿಗಳು ಹೋಟೆಲ್‌ನಲ್ಲಿದ್ದ ಅವರ ಮಗ ಸೈಪ್ (20) ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಗೆ ಒಳಗಾಗಿರುವ ಸೈಫ್ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
Kshetra Samachara
22/02/2022 09:03 am