ಮಂಗಳೂರು: ನಗರದ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮುಂಭಾಗ ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ 4.150 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಕುತ್ತಾರು ಪದವು, ಮದನಿ ನಗರ, ಮುನ್ನೂರು ಗ್ರಾಮ ನಿವಾಸಿ ಅಬ್ದುಲ್ ಹಕೀಂ ಅಲಿಯಾಸ್ ಕರಾಟೆ ಹಕೀಂ (45) ಬಂಧಿತ ಆರೋಪಿ.
ಆಟೊರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿ ಅಬ್ದುಲ್ ಹಕೀಂನನ್ನು ಬಂಧಿಸಿದ್ದಾರೆ.
ಬಂಧಿತನಿಂದ 4.150 ಕೆಜಿ ತೂಕದ 40,300 ರೂ. ಮೌಲ್ಯದ ಗಾಂಜಾ, 20 ಗ್ರಾಂ ತೂಕದ 1.20 ಲಕ್ಷ ರೂ. ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಆಟೋರಿಕ್ಷಾ, 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ರೌಡಿಶೀಟರ್ ಆಗಿದ್ದು, ಈತನ ಮೇಲೆ ವಿವಿಧ ಠಾಣೆಗಳಲ್ಲಿ 20 ಪ್ರಕರಣಗಳು ದಾಖಲಾಗಿವೆ.
Kshetra Samachara
22/02/2022 09:35 am