ವಿಟ್ಲ: ಚಂದಳಿಕೆಯ ಕಾಂತಾಮೂಲೆ ಎಂಬಲ್ಲಿ ತಂದೆ ತನ್ನ ಮಗನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಕಾಂತಾಮೂಲೆ ನಿವಾಸಿ ಚಿರತೆ ದಿನೇಶ್(45) ಎಂಬಾತನನ್ನು ಆತನ ತಂದೆ ವಸಂತ ಗೌಡ ಮರದ ತುಂಡಿನಿಂದ ಹಲ್ಲೆಗೈದು ಹತ್ಯೆ ಮಾಡಿದ್ದ.
ದಿನೇಶ್ ಮತ್ತು ಆತನ ತಂದೆ ಇಬ್ಬರೇ ಮನೆಯಲ್ಲಿ ವಾಸವಿದ್ದು, ಆತನ ತಂದೆಯೇ ಕೊಲೆಗೈದಿರಬಹುದೆಂಬ ಸಂಶಯ ವ್ಯಕ್ತವಾಗಿತ್ತು. ಅದರಂತೆ ಆರೋಪಿ ವಸಂತ ಗೌಡನನ್ನು ಪೊಲೀಸರು ಬಂಧಿಸಿದ್ದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಅವರು ಮಾಧ್ಯಮದವರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿ ಮೃತನ ತಂದೆಯನ್ನು ಬಂಧಿಸಲಾಗಿದ್ದು, ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಈ ಕೃತ್ಯ ಒಬ್ಬನೇ ಮಾಡಿದ್ದ ಅಥವಾ ಆತನ ಜತೆ ಬೇರೆಯವರು ಸೇರಿ ಮಾಡಿದ್ದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
Kshetra Samachara
24/02/2022 01:10 pm