ಕುಂದಾಪುರ: ಕುಂದಾಪುರದ ಆರ್ ಎನ್ ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ ಹಾಕಲಾಗಿದ್ದು ಈ ಸಂಬಂಧ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಇಂಟರ್ನೆಟ್ ಕರೆಯ ಮೂಲಕ ಬೆದರಿಕೆ ಹಾಕಿರುವ ದುಷ್ಕರ್ಮಿ,ಹಿಜಾಬ್ ಹಾಕಲು ಅವಕಾಶ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಕರೆಯ ಜಾಡು ಹಿಡಿದು ಕೋಲಾರಕ್ಕೆ ಹೋಗಿ ಧಮ್ಕಿ ಹಾಕಿದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ ಮೊಹಮ್ಮದ್ ಶಬೀರ್ ಬಂಧಿತ ಆರೋಪಿಯಾಗಿದ್ದಾನೆ.
ಕುಂದಾಪುರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kshetra Samachara
28/02/2022 01:28 pm