ಮಂಗಳೂರು: ಇತ್ತೀಚೆಗೆ ನಗರದ ಅಪಾರ್ಟ್‌ಮೆಂಟ್ ಒಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಜಾಲ ಪ್ರಕರಣವನ್ನು ಪತ್ತೆಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು ಈಗ ಮತ್ತೊಂದು ಪ್ರಕರಣವನ್ನು ಬೇಧಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಸಂದರ್ಭ ನಾಲ್ವರು ನೊಂದ ಯುವತಿಯರನ್ನು ರಕ್ಷಿಸಲಾಗಿದೆ.
ಬಂಟ್ವಾಳ, ವಿಟ್ಲಪಡ್ನೂರು ಗ್ರಾಮದ ಪರ್ತಿಪಾಡಿ ನಿವಾಸಿ ಕೆ.ಪಿ.ಹಮೀದ್(54), ಆಕಾಶಭವನ, ನಾಗಬ್ರಹ್ಮ ಕಟ್ಟೆಯ ನಂದನಪುರ ನಿವಾಸಿ ಅನುಪಮಾ ಶೆಟ್ಟಿ(46), ಸುಬ್ರಹ್ಮಣ್ಯ, ಕುಲ್ಕುಂದ ಮೂಲದ ಪ್ರಸ್ತುತ ನಗರದ ಎಕ್ಕೂರು, ವಾಸುಕಿ ನಗರ ನಿವಾಸಿ ನಿಶ್ಮಿತಾ(23) ಬಂಧಿತ ಆರೋಪಿಗಳು.
ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್‌ನ ಪೀಬಿ ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಆರೋಪಿಗಳು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಪಿಂಪ್‌ಗಳನ್ನು ವಶಕ್ಕೆ ಪಡೆದುಕೊಂಡು ನಾಲ್ವರು ನೊಂದ ಯುವತಿಯರನ್ನು ರಕ್ಷಿಸಿದ್ದಾರೆ.
ಬಂಧಿತರಿಂದ 5 ಮೊಬೈಲ್ ಫೋನ್, 50 ಸಾವಿರ ರೂ. ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
02/03/2022 04:55 pm