ಕುಂದಾಪುರ: ಕೆಲವರ್ಷಗಳಿಂದ ತಾನು ಪ್ರೀತಿಸುತ್ತಿದ್ದ ಯುವತಿ ಪ್ರೀತಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಲ್ವಾಡಿಯಲ್ಲಿ ಸಂಭವಿಸಿದೆ.
ವಂಡ್ಲೆಯ ನಿವಾಸಿ ರಿಜ್ವಾನ್ (26) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈತ ಕಳೆದ 3 ವರ್ಷಗಳಿಂದ ಗಂಗೊಳ್ಳಿ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದು, ಆದರೆ ಆಕೆ ಇತ್ತೀಚೆಗೆ ಪ್ರೀತಿಯನ್ನು ತಿರಸ್ಕರಿಸಿದ್ದಾಳೆ ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ಮನನೊಂದಿದ್ದ ರಿಜ್ವಾನ್ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಗ ಮನೆಯವರು ಸಮಾಧಾನಪಡಿಸಿದ್ದರು. ಬಳಿಕ ಆತ ಉದ್ಯೋಗ ಮಾಡುತ್ತಿದ್ದ ಸಂಸ್ಥೆಯ ಮಾಲಕ ಇರ್ಫಾನ್ ಅವರು ರಿಜ್ವಾನ್ ಅವರನ್ನು ಕೆಲಸಕ್ಕೆ ಕರೆದುಕೊಂಡು ಹೋಗಿದ್ದರು. ಅಂದು ರಾತ್ರಿ ಬಾಡಿಗೆ ಮನೆಯಲ್ಲಿ ರಿಜ್ವಾನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/03/2022 11:16 am