ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಬೆರಳುಮುದ್ರೆ ಘಟಕದಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ತಿಪ್ಪಣ ನಾಗವ್ವ ಮಾದರ (37) ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಅವರು ನಿನ್ನೆ ಎಸ್‌ಪಿ ಕಚೇರಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ನಿವಾಸಿಯಾಗಿರುವ ತಿಪ್ಪಣ ನಾಗವ್ವ ಮಾದರ ಅವರು 2011ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಇಲಾಖೆಗೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು ಆರು ತಿಂಗಳ ಹಿಂದೆ ಮುಂಬಡ್ತಿಗೊಂಡು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಎಸ್‌ಪಿ ಕಚೇರಿಯಲ್ಲಿ ಬೆರಳು ಮುದ್ರೆ ಘಟಕಕ್ಕೆ ಎ.ಬಿ ಶೆಟ್ಟಿ ಸರ್ಕಲ್ ಬಳಿಯಿಂದ ನಡೆದುಕೊಂಡು ಬರುತ್ತಿದ್ದ ಸಂದರ್ಭ ಅವರು ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಎಂ.ವಿ ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.
Kshetra Samachara
05/03/2022 12:13 pm