ಉಡುಪಿ: ಜಿಲ್ಲೆಯ ಕುಂದಾಪುರದ ಅಚ್ಲಾಡಿಯಲ್ಲಿರುವ ಇಸಿಆರ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡಿ ಕಾಲೇಜಿನಲ್ಲಿ ರ್‍ಯಾಗಿಂಗ್ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿಗಳು ದುರ್ಗಾದಾಸ್ ಎಂಬ ವಿದ್ಯಾರ್ಥಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ದಿಲ್ಶಾದ್ ಮತ್ತು ಶಿಂಡೋ ಎಂಬ ಇಬ್ಬರು ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳನ್ನು ತೀವ್ರವಾಗಿ ರ್‍ಯಾಗಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಯುವಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
08/03/2022 12:48 pm