ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ವಿದ್ಯಾರ್ಥಿಗೆ ಕಿರುಕುಳ, ಹಲ್ಲೆ; ರಕ್ಷಣೆಗೆ ಹಿಂಜಾವೇ ಪ್ರವೇಶ, ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ವರದಿ: ರಹೀಂ ಉಜಿರೆ

ಕುಂದಾಪುರ: ಕುಂದಾಪುರ ಠಾಣೆ ವ್ಯಾಪ್ತಿಯ ಆಚ್ಲಾಡಿಯಲ್ಲಿನ ಖಾಸಗಿ ಮ್ಯಾನೇಜ್‌ ಮೆಂಟ್ ಕಾಲೇಜ್‌ ನಲ್ಲಿ ಜ್ಯೂನಿಯರ್ ಸಹಪಾಠಿ ಮೇಲೆ ವಿದ್ಯಾರ್ಥಿಗಳಿಬ್ಬರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

ನಿನ್ನೆ ತಡರಾತ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ದೇವದಾಸ್ ಎಂಬ ವಿದ್ಯಾರ್ಥಿಗೆ ದಿಲ್ಶಾದ್ ಮತ್ತು ಶಿಂಟೋ ಎಂಬವರು ಕೈ ಮತ್ತು ಬಾಟಲಿಯಿಂದ ಗಂಭೀರ ಹಲ್ಲೆ ನಡೆಸಿದ್ದಾರೆ. ತೀವ್ರ ರಕ್ತಸ್ರಾವವಾಗಿ ಕುಸಿದುಬಿದ್ದ ದೇವದಾಸ್ ನನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆಗೈದವರು ದೇವದಾಸ್ ಗೆ ನಾನಾ ರೀತಿ ಹಿಂಸೆ ನೀಡಿದ್ದಾರೆಂದು ತಿಳಿದುಬಂದಿದೆ.

ಇದೇ ಮೊದಲೇನಲ್ಲ!: ಕಾಲೇಜಿನಲ್ಲಿ ಹಿಂದೆಯೂ ಇಂತಹ ಘಟನೆಗಳು ನಡೆದಿದ್ದು, ಕೇರಳ ಮೂಲದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ಈ ಬಗ್ಗೆ ಗಂಭೀರವಾಗಿ ಕ್ರಮ ಕೈಗೊಳ್ಳದ್ದರಿಂದ ಹಿಂಜಾವೇ ಮುಖಂಡರು ಕಾಲೇಜಿಗೆ ಭೇಟಿ ನೀಡಿ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಹಿಂಜಾವೇ ಮುಖಂಡರು ಸ್ಥಳಕ್ಕೆ ಧಾವಿಸಿದ ವಿಷಯ ತಿಳಿಯುತ್ತಿದ್ದಂತೆ ಕುಂದಾಪುರ ಪೊಲೀಸರು ಕಾಲೇಜಿಗೆ ಬಂದು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ತಲೆಗೆ ಗಂಭೀರ ಹೊಡೆತ ಬಿದ್ದ ಕಾರಣ ದೇವದಾಸ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ವಾರದ ಹಿಂದೆ ಈ ಕಾಲೇಜಿನಲ್ಲಿ ಹಲ್ಲೆಗೈದ ಇಬ್ಬರು ವಿದ್ಯಾರ್ಥಿಗಳ ಸಹಿತ ಐವರನ್ನು ಅಶಿಸ್ತಿಗೆ ಸಸ್ಪೆಂಡ್ ಮಾಡಲಾಗಿತ್ತು. ಇದೇ ವಿಚಾರಕ್ಕೆ ದೇವದಾಸ್ ಗೆ ಹಲ್ಲೆ ನಡೆದಿದೆ ಎನ್ನಲಾಗಿದೆ. ರಾಗಿಂಗ್ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.

Edited By : Shivu K
Kshetra Samachara

Kshetra Samachara

09/03/2022 02:32 pm

Cinque Terre

11.43 K

Cinque Terre

1

ಸಂಬಂಧಿತ ಸುದ್ದಿ