ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಭಜನಾ ಮಂದಿರ ಜಾಗದ ವಿಚಾರ,ಇತ್ತಂಡಗಳ ಮಧ್ಯೆ ಹಲ್ಲೆ

ಪುತ್ತೂರು:ಜಾಗದ ವಿಷಯವಾಗಿ ಇತ್ತಂಡಗಳ ಮಧ್ಯೆ ಹಲ್ಲೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

ಭಜನಾ ಮಂಡಳಿ ಜಾಗದ ವಿಷಯವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆ ಮಾಡಲಾಗಿದೆ. ಒಂದು ತಂಡ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾದ್ರೆ ಮತ್ತೊಂದು ತಂಡ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದೆ.

ಆರ್ಯಾಪು ಗ್ರಾಮದ ದೊಡ್ಡಡ್ಕ ನಿವಾಸಿ ಸರೋಜಿನಿ ಎಂಬುವವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಂದು ತಂಡದ ಪೂವಪ್ಪ ನಾಯ್ಕ್ ಮತ್ತು ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೂವಪ್ಪ ನಾಯ್ಕ್ ಅವರು ಮಹಾಲಕ್ಷ್ಮಿ ಭಜನಾ ಮಂದಿರದ ಸದಸ್ಯರಾಗಿದ್ದು, ಭಜನಾ ಮಂದಿರದ ಸುತ್ತ ಹುಲ್ಲು ತೆಗೆದು ಸ್ವಚ್ಛಗೊಳಿಸಲು ತೆರಳಿದ ವೇಳೆ ಹತ್ತಿರದ ಮನೆಯ ನಾಗರಾಜ ಆಚಾರ್ಯ, ನಾರಾಯಣ ಆಚಾರ್ಯ, ಸರೋಜಿನಿ, ನಾಗರಾಜ ಆಚಾರ್ಯ ಅವರ ಪತ್ನಿ ಮತ್ತು ಅತ್ತಿಗೆ ಮಾರಕಾಯುಧಗಳನ್ನು ತಂದು ಪೂವಪ್ಪ ನಾಯ್ಕ್ ಮತ್ತು ಅವರ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಪೂವಪ್ಪ ನಾಯ್ಕ್ ರವರು ದೂರು ನೀಡಿದ್ದಾರೆ. ಅತ್ತ ಈ ಬಗ್ಗೆ ಸರೋಜಿನಿ ರವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೊಡ್ಡಡ್ಕ ನಿವಾಸಿ ಪೂವಪ್ಪ ನಾಯ್ಕ್, ವೆಂಕಟಕೃಷ್ಣ ಭಟ್,ಸೇಸಪ್ಪ ನಾಯ್ಕ್ ಹಾಗೂ ಅವರ ಸಂಗಡಿಗರ ವಿರುದ್ಧ ದೂರು ನೀಡಿದ್ದಾರೆ.

Edited By :
Kshetra Samachara

Kshetra Samachara

14/03/2022 12:02 pm

Cinque Terre

13.13 K

Cinque Terre

0

ಸಂಬಂಧಿತ ಸುದ್ದಿ