ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್ ನಲ್ಲಿ ಬಂದ ಅಪರಿಚಿತರಿಂದ ಮಹಿಳೆಯ ಚಿನ್ನದ ಸರ ಎಳೆದು ಪರಾರಿ!

ಕೋಟ : ಬೈಕ್ ನಲ್ಲಿ ಬಂದ ಅಪರಿಚಿತರು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 1.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕದ್ದೊಯ್ದ ಘಟನೆ ಕೋಟ ವ್ಯಾಪ್ತಿಯಲ್ಲಿ ಹಾಡಹಗಲೇ ಸಂಭವಿಸಿದೆ.

ಸ್ಥಳೀಯ ನಿವಾಸಿ ಸುಮಿತ್ರಾ ಉಪಾಧ್ಯ (64) ಅವರು ಮನೆಯ ಸಮೀಪ ನಡೆದುಕೊಂಡು ಬರುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು,ಮಹಿಳೆ ಬಳಿ ಬಂದು ಹಿಂದಿ ಭಾಷೆಯಲ್ಲಿ ಅಕ್ಕಪಕ್ಕದ ಜಾಗದ ಬಗ್ಗೆ ವಿಚಾರಿಸಿದ್ದಾರೆ.ಈ ವೇಳೆ ಏಕಾಏಕಿ ಕುತ್ತಿಗೆಗೆ ಕೈಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದಾರೆ.

ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಗೌಡ ಸ್ಥಳಕ್ಕಾಗಮಿಸಿ ತನಿಖೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಶೋಧ ನಡೆಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

16/03/2022 03:05 pm

Cinque Terre

10.67 K

Cinque Terre

0

ಸಂಬಂಧಿತ ಸುದ್ದಿ