ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 36.54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನಲ್ಲಿ ಅಕ್ರಮ ಸಾಗಾಟದ 36.54 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ. ಈ ಪ್ರಯಾಣಿಕನನ್ನು ತಪಾಸಣೆ ಮಾಡಿದ ವಿಮಾನ ನಿಲ್ದಾಣದ ಕಸ್ಟಮರ್ ಅಧಿಕಾರಿಗಳು ಆತ ದೇಹದೊಳಗೆ ಮರೆಮಾಚಿ ಚಿನ್ನ ಅಕ್ರಮ ಸಾಗಾಟ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ.
ಈತ ಚಿನ್ನವನ್ನು ಪೇಸ್ಟ್ ನೊಳಗೆ ಇಟ್ಟು ಮೂರು ಉಂಡೆಯ ರೂಪದಲ್ಲಿ ಸಾಗಾಟ ಮಾಡುತ್ತಿದ್ದ. ಆರೋಪಿಯಿಂದ ಕಸ್ಟಮ್ಸ್ ಅಧಿಕಾರಿಗಳು 24 ಕ್ಯಾರೆಟ್ ನ 706 ಗ್ರಾಂ ತೂಕದ 36.54 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.
Kshetra Samachara
19/03/2022 10:47 pm