ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಕ್ರಮ ಮನೆ ನಿರ್ಮಾಣ : ಬಿಲ್ಡರ್ ಮೇಲೆ ಪ್ರಕರಣ ದಾಖಲು

ಮಂಗಳೂರು: ಕಡಲ್ಕೊರೆತದ ಸಂತ್ರಸ್ತರಿಗೆ ಮೀಸಲಿಟ್ಟಿದ್ದ 1.22 ಎಕರೆ ಸ್ಥಳದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡಿರುವ ಬಿಲ್ಡರ್ ಓರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮಂಗಳೂರಿನ ಕೋಟೆಕಾರು ಪಪಂ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ 1.22 ಎಕರೆ ಜಾಗವನ್ನು ಮೀಸಲಿರಿಸಲಾಗಿತ್ತು.

ಈ ಕೋಟ್ಯಂತರ ರೂ. ಮೌಲ್ಯದ 1.22 ಎಕರೆ ಜಾಗದಲ್ಲಿ ಪ್ರಭಾವಿ ಬಿಲ್ಡರ್ ಶರತ್ ರಾಜ್ ಎಂಬಾತ ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದ. ಈ ಹಗರಣದ ಬಗ್ಗೆ ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ರಾಯಪ್ಪ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರು ಅನಧಿಕೃತವಾಗಿ ನಿರ್ಮಾಣ ಮಾಡುತ್ತಿದ್ದ ಸ್ಥಳಕ್ಕೆ ಇಂದು ಮಧ್ಯಾಹ್ನ ದಾಳಿ ನಡೆಸಿದ್ದಾರೆ. ಇದೀಗ ಬಿಲ್ಡರ್ ಶರತ್ ರಾಜ್ ಮೇಲೆ ಪ್ರಕರಣ ದಾಖಲಾಗಿದೆ. ಈ ಹಗರಣದಲ್ಲಿ ಉಳ್ಳಾಲ ನಗರಸಭೆ, ಕೋಟೆಕಾರು ಪ.ಪಂ. ಮತ್ತು ಕಂದಾಯ ಇಲಾಖೆಯ ಅಧಿಕಾರಿ ವರ್ಗ ಲಂಚ ಪಡೆದು ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Edited By : Nirmala Aralikatti
Kshetra Samachara

Kshetra Samachara

24/03/2022 08:57 pm

Cinque Terre

16 K

Cinque Terre

2

ಸಂಬಂಧಿತ ಸುದ್ದಿ