ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ದನದ ಮಾಂಸ ಮಾರಾಟ ಕೇಸ್- ಆರೋಪಿ ಅರೆಸ್ಟ್

ಬಂಟ್ವಾಳ: ದ್ವಿ ಚಕ್ರವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಮಾರ್ಚ್ 27ರಂದು ಆದಿತ್ಯವಾರ ಗೂಡಿನಬಳಿಯಲ್ಲಿ ನಡೆದಿದೆ.

ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಬಂಧಿತ ಆರೋಪಿ. ಆರೋಪಿಯ ದ್ವಿ ಚಕ್ರವಾಹನ ಹಾಗೂ ಅದರಲ್ಲಿದ್ದ 20 ಕೆ.ಜಿ‌. ಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಮಹಮ್ಮದ್ ಮುಸ್ತಫಾ ಹಾಗೂ ಸ್ನೇಹಿತ ಇಬ್ಬರು ಸೇರಿ ಅಕ್ರಮವಾಗಿ ದನಗಳನ್ನು ಕದ್ದು ತಂದು ಪ್ರತಿ ಆದಿತ್ಯವಾರ ದಿನ ಮನೆಯಲ್ಲಿ ಕಡಿದು ಮಾಂಸ ಮಾಡಿ ಬಳಿಕ ಮಾರಾಟ ಮಾಡುತ್ತಾರೆ ಎಂಬ ಮಾಹಿತಿ ಪೊಲೀಸರಿಗೆ ದೊರಕಿದೆ.

Edited By : Vijay Kumar
Kshetra Samachara

Kshetra Samachara

27/03/2022 07:37 pm

Cinque Terre

17.64 K

Cinque Terre

8