ಪುತ್ತೂರು: ಆಟೋ ರಿಕ್ಷಾದಲ್ಲಿ ಮಹಿಳೆಯನ್ನು ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದಲ್ಲದೆ ಜೀವ ಬೆದರಿಕೆಯೊಡ್ಡಿದ ಕುರಿತ ಆರೋಪಕ್ಕೆ ಸಂಬಂಧಿಸಿ ವ್ಯಕ್ತಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ವಾನ್ ಅವರು ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು ಹೇಳಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ದರ್ಬೆ ಹರ್ಷ ಇಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಕುತ್ತಿಗೆ ಹಿಡಿದು ಮಾನಭಂಗಕ್ಕೆ ಯತ್ನಿಸಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಕುರಿತು ನೊಂದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 354, 323, 504, 506ರಂತೆ ಪ್ರಕರಣ ದಾಖಲಾಗಿದೆ.
Kshetra Samachara
29/03/2022 05:34 pm