ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರವೆಸಗಿ ಮಗುವಿನ ಜನ್ಮಕ್ಕೆ ಕಾರಣನಾದ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭವತಿಯಾಗಿ ಶಿಶುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಸುರತ್ಕಲ್ ಸಮೀಪದ ಸಸಿಹಿತ್ಲು  ನಿವಾಸಿ ವಾಮನ ಪೂಜಾರಿ (59) ಶಿಕ್ಷೆಗೊಳಗಾದ ಆರೋಪಿ. ಪ್ರಕರಣದ ಆರೋಪಿ 2016ಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮನೆಯಲ್ಲಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದ. ಬಳಿಕ ನಿರಂತರವಾಗಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, 2017 ಮಾ.29 ರಂದು ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು.

ಬಳಿಕ ಡಿಎನ್‌ಎ ಪರೀಕ್ಷೆ ನಡೆಸಿದಾಗ ಆರೋಪಿ ವಾಮನ ಪೂಜಾರಿಯೇ ಆ ಮಗುವಿನ ಜೈವಿಕ ತಂದೆ ಎನ್ನುವುದು ಸಾಬೀತಾಗಿತ್ತು. ಸುರತ್ಕಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪೊಕ್ಸೊ  ಕಾಲಂ 6 ರನ್ವಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30 ಸಾವಿರ ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಹೆಚ್ಚುವರಿಯಾಗಿ 2 ತಿಂಗಳ ಸದಾ ಸಜೆಯನ್ನು  ಅನುಭವಿಸ ಬೇಕು. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

31/03/2022 09:52 pm

Cinque Terre

15.13 K

Cinque Terre

1

ಸಂಬಂಧಿತ ಸುದ್ದಿ