ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಹೆಜಮಾಡಿ ಚೆಕ್ ಪೋಸ್ಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರ್ ಪಲ್ಟಿಯಾಗಿದೆ. ಚಾಲಕ ಪವಾಡಸದೃಶವಾಗಿ ಪಾರಾಗಿದ್ದಾರೆ.
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಅತಿ ವೇಗದಿಂದ ಉಡುಪಿ ಜಿಲ್ಲೆಯ ಹೆಜಮಾಡಿ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನಿಗೆ ವೇಗ ತಡೆಗೆ ಇರಿಸಿದ್ದ ಬ್ಯಾರಿಕೇಡ್ ಕಾಣಿಸದೆ ವಾಹನವು ಹೆದ್ದಾರಿ ಬದಿಯ ಮಣ್ಣಿನ ರಸ್ತೆಯಲ್ಲಿ ಚಲಿಸಿದೆ. ಆ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿ ಟೆಂಪೋಗೆ ಡಿಕ್ಕಿ ಹೊಡೆದಿದ್ದು ಓಮ್ನಿ ಚಾಲಕ ಪವಾಡಸದೃಶ ಪಾರಾಗಿದ್ದಾನೆ. ಅಪಘಾತದ ರಭಸಕ್ಕೆ ಒಮ್ನಿ ಜಖಂಗೊಂಡಿದೆ. ಅಪಘಾತದ ಭೀಕರ ದೃಶ್ಯ ಹೆಜಮಾಡಿ ಟೋಲ್ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
02/04/2022 09:22 pm