ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದ ಕೆಳಕಂಪ ಎಂಬಲ್ಲಿ ಮಹಿಳೆಯೊಬ್ಬರು ನಾಪತ್ತೆಯಾದ ಕುರಿತು ದೂರು ದಾಖಲಾಗಿದೆ.
ಹೊಸೂರು ಗ್ರಾಮದ ರೇವತಿ (28) ನಾಪತ್ತೆಯಾದವರು. ರೇವತಿ ಅವರು ತಮ್ಮ ಗಂಡ ಮೃತಪಟ್ಟ ಬಳಿಕ ಮಾನಸಿಕ ಅಸ್ವಸ್ಥರಾಗಿದ್ದರು. ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರೂ ಸಂಪೂರ್ಣ ಗುಣಮುಖರಾಗಿರಲಿಲ್ಲ. ಮಾ.27 ರಿಂದ ಮಾ.28 ರ ನಡುವಿನ ಅವಧಿಯಲ್ಲಿ ಅವರು ಮನೆ ಬಿಟ್ಟು ಹೋಗಿದ್ದಾರೆ.ಈ ಬಗ್ಗೆ ಮನೆಯವರು ನೆರೆಕರೆಯವರಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದರೂ ಎಲ್ಲೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಸಹನಾ ಬಾಯಿ ಎಂಬವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
05/04/2022 11:30 am