ಕಾರ್ಕಳ: ಮೂಡುಬಿದಿರೆ ಕಾರ್ಕಳ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಜೆಸಿಬಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಇರ್ವತ್ತೂರಿನ ಅವಿನಾಶ್ (27) ಎಂಬಾತ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಪೈಂಟಿಂಗ್ ವೃತ್ತಿ ನಡೆಸುತ್ತಿದ್ದ ಯುವಕ ರಾತ್ರಿ ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಜೆಸಿಬಿ ಚಾಲಕ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬೇರೆ ವಾಹನ ಚಾಲಕರು ಸ್ಥಳೀಯರ ನೆರವು ಪಡೆದು ಜೆಸಿಬಿ ಅಡಿ ಸಿಲುಕಿಕೊಂಡಿದ್ದ ಮೃತ ದೇಹವನ್ನು ಹೊರತೆಗೆದಿದ್ದಾರೆ. ಕಾರ್ಕಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
05/04/2022 11:46 am