ವಿಟ್ಲ: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದ ಕುದ್ರಿಯ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಕರುಣಾಕರ, ಶರತ್ಕುಮಾರ ಮತ್ತು ಅವಿನಾಶ್ ಬಂಧಿತ ಆರೋಪಿಗಳು ಕೊಳ್ನಾಡು ಗ್ರಾಮದ ಕುದ್ರಿಯಾ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಐಪಿಎಲ್ ಕ್ರಿಕೆಟ್ ಪಂದ್ಯಾಟಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿಟ್ಲ ಎಸ್ ಐ ಸಂದೀಪ್ ಕುಮಾರ್ ಮತ್ತು ತಂಡ ದಾಳಿ ನಡೆಸಿದೆ.
ಈ ಸಂದರ್ಭ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಲಕ್ನೋ ಹಾಗೂ ಹೈದರಬಾದ್ ತಂಡಗಳ ನಡುವೆ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾಟಕ್ಕೆ ತಾವು ಬೆಟ್ಟಿಂಗ್ ನಡೆಸುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಲ್ಯಾಪ್ ಟ್ಯಾಪ್, ನಗದು, ಮೊಬೈಲ್ ವಶಕ್ಕೆ ಪಡೆದಿದ್ದಾರೆ.
Kshetra Samachara
05/04/2022 03:59 pm