ಉಡುಪಿ: ಗೂಡು ಸೇರಬೇಕಾದ ಕೋಳಿಯು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರಂಗ್ರಪಾಡಿಯ ಕೆಮ್ತೂರಿನಲ್ಲಿ ನಿನ್ನೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಶ್ರೀನಿವಾಸ ಪುಜಾರಿ (65) ಎಂದು ಗುರುತಿಸಲಾಗಿದೆ. ನಗರ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಶವವನ್ನು ವೈದ್ಯಕೀಯ ಪರೀಕ್ಷೆಗೆ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು.
PublicNext
13/04/2022 11:22 am