ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಫಿಶ್‌ ಮೀಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ: ಮೃತರ ಸಂಖ್ಯೆ 5ಕ್ಕೆ ಏರಿಕೆ

ಮಂಗಳೂರು: ಎಂಎಸ್ಇಝಡ್‌ನಲ್ಲಿರುವ ಶ್ರೀ ಉಲ್ಕಾ ಎಂಬ ಫಿಶ್‌ ಮೀಲ್‌ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಐದು ಮಂದಿ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಮೃತರನ್ನು ಮೊಹಮ್ಮದ್ ಸಮಿಉಲ್ಲಾ‌ ಇಸ್ಲಾಮ್, ಉಮ್ಮರ್ ಫಾರೂಕ್, ನಿಜಾಮುದ್ದೀನ್, ಮಿರಾಜುಲ್ ಇಸ್ಲಾಂ, ಶರಾಫತ್ ಆಲಿ ಎಂದು ಗುರುತಿಸಲಾಗಿದೆ. ಇವರು ಪಶ್ಚಿಮ ಬಂಗಾಳ ಮೂಲದವರು. ಇನ್ನು ಹಸನ್ ಆಲಿ, ಮೊಹಮ್ಮದ್ ಕರೀಬುಲ್ಲಾ, ಹಫೀಜುಲ್ಲಾ ಎಂಬ ಮೂವರು ಕಾರ್ಮಿಕರು ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀ ಉಲ್ಕಾ ಕಂಪನಿ ಮುಂಬೈ ಮೂಲದ ರಾಜು ಎಂಬುವವರ ಒಡೆತನದಲ್ಲಿದೆ‌. ನಿನ್ನೆ ಸಂಜೆ ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಶ್ರೀ ಉಲ್ಕಾ ಎಲ್‌ಎಲ್‌ಪಿ ಎಂಬ ಮೀನು ಸಂಸ್ಕರಣಾ ಕಂಪೆನಿಯ ತ್ಯಾಜ್ಯ ಸಂಗ್ರಹ ತೊಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ರಾತ್ರಿ ಮೃತಪಟ್ಟಿದ್ದಾರೆ. ಅಸ್ವಸ್ಥರಾಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಮತ್ತಿಬ್ಬರು ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಕಂಪೆನಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ ವಹಿಸಿದ ಬಗ್ಗೆ ಬಜಪೆ ಠಾಣೆಯಲ್ಲಿ 337,338,304 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ಅಲ್ಲದೇ ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ ಮತ್ತು ಅಲ್ಲಿನ ಸೂಪರ್ ವೈಸರ್ ಮೊಹಮ್ಮದ್ ಅನ್ವರ್ ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಫಾರೂಕ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಮೃತಪಟ್ಟವರ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು ಮೃತದೇಹಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳಲಾಗ್ತದೆ.

Edited By : Nagaraj Tulugeri
PublicNext

PublicNext

18/04/2022 10:32 am

Cinque Terre

31.77 K

Cinque Terre

1

ಸಂಬಂಧಿತ ಸುದ್ದಿ