ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಬಾಡಿಗೆ ನೆಪದಲ್ಲಿ ಕರೆದೊಯ್ದ ತಂಡದಿಂದ ಚಾಲಕನ ಸುಲಿಗೆ!

ಮಣಿಪಾಲ: ಬಾಡಿಗೆ ನೆಪದಲ್ಲಿ ಕರೆದೊಯ್ದ ತಂಡವೊಂದು ಚಾಲಕನನ್ನೇ ಸುಲಿಗೆ ಮಾಡಿರುವ ಘಟನೆ ಎ.27 ರಂದು ರಾತ್ರಿ ವೇಳೆ ನಡೆದಿದೆ.

80 ಬಡಗಬೆಟ್ಟುವಿನ ಶಾಂತಿನಗರದ ಶ್ರೀಧರ ಭಕ್ತ (61) ಎಂಬವರು ಮಣಿಪಾಲದಲ್ಲಿ ಎಂದಿನಂತೆ ಎ.27ರಂದು ಸಂಜೆ ತನ್ನ ಕಾರನ್ನು ಬಾಡಿಗೆಗೆ ನಿಲ್ಲಿಸಿದ್ದರು. ಸುಮಾರು 35ರಿಂದ 45 ವರ್ಷ ಪ್ರಾಯದ ತುಳು ಮಾತನಾಡುವ ನಾಲ್ಕು ಮಂದಿ ಬಂದು, ಕಾರವಾರಕ್ಕೆ ಹೋಗಲು ಕಾರನ್ನು ಬಾಡಿಗೆಗೆ ಗೊತ್ತು ಮಾಡಿ ಕರೆದುಕೊಂಡು ಹೋಗಿದ್ದರು.

ರಾತ್ರಿ 8.40 ಗಂಟೆಗೆ ಅಂಕೋಲ ರೈಲ್ವೆ ನಿಲ್ದಾಣದ ಸಮೀಪ ಕಾರನ್ನು ಆರೋಪಿಗಳು ನಿಲ್ಲಿಸಲು ಹೇಳಿ, ಹಿಂಬದಿಯಲ್ಲಿದ್ದ ಒಬ್ಬ ವ್ಯಕ್ತಿಯು ಶ್ರೀಧರ ಭಕ್ತರ ಕುತ್ತಿಗೆಯನ್ನು ಒತ್ತಿ ಹಿಡಿದು, ಉಳಿದ ಮೂವರು ಅವರನ್ನು ಚಾಲಕ ಸೀಟಿನಿಂದ ಹಿಂದಿನ ಸೀಟಿಗೆ ಎಳೆದು ಕುಳ್ಳಿರಿಸಿದ್ದಾರೆ. ನಂತರ ಚೂರಿ ತೋರಿಸಿ, ಶ್ರೀಧರ ಭಕ್ತ ಪರ್ಸ್‌ನಲ್ಲಿದ್ದ 3000ರೂ. ನಗದು ಹಾಗೂ ಕೈಯಲ್ಲಿದ್ದ ವಾಚ್ ಸುಲಿಗೆ ಮಾಡಿದ್ದಾರೆ.

ಬಳಿಕ ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಕಾರನ್ನು ಚಲಾಯಿಸಿಕೊಂಡು ರಾತ್ರಿ 11.30ರ ಸುಮಾರಿಗೆ ಕುಂದಾಪುರದ ಆನೆಗುಡ್ಡೆಗೆ ಕರೆದುಕೊಂಡು ಬಂದಿದ್ದು, ಎಟಿಎಂ ಬಳಿ ಕಾರನ್ನು ನಿಲ್ಲಿಸಿ ಹಣ ತೆಗೆದು ತರುವಂತೆ ಶ್ರೀಧರ ಭಕ್ತನಿಗೆ ಹೇಳಿದ್ದಾರೆ. ಕಾರಿನಿಂದ ಇಳಿದು ಎ.ಟಿ.ಎಂ ನ ಒಳಗೆ ಹೋದಂತೆ ನಟಿಸಿದ ಚಾಲಕ ಶ್ರೀಧರ್ ಭಕ್ತ, ಹೊರಗೆ ಬಂದು ಹೋಗಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

29/04/2022 07:02 pm

Cinque Terre

34.35 K

Cinque Terre

0

ಸಂಬಂಧಿತ ಸುದ್ದಿ