ಮಂಗಳೂರು: ದನಗಳವು ಮಾಡಿ ಮಾಂಸ ಮಾಡಿ ಮಾರಾಟ ಮಾಡಿದ ನಾಲ್ವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ತೋಕೂರು ಗ್ರಾಮದ ಜೋಕಟ್ಟೆ ನಿವಾಸಿಗಳಾದ ಮಹಮ್ಮದ್ ಇಸ್ಮಾಯಿಲ್ ಅಲಿಯಾಸ್ ಇಚ್ಚ ಜೋಕಟ್ಟೆ, ಸಮೀರ್ ಜೋಕಟ್ಟೆ, ದಾವೂದ್ ಹಕೀಂ, ಮಹಮ್ಮದ್ ಇಲ್ಯಾಸ್ ಬಂಧಿತ ಆರೋಪಿಗಳು.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಕೂರು ನಿವಾಸಿ ಮಹಾಬಲ ಪೂಜಾರಿ ಎಂಬವರ ಹಟ್ಟಿಯಿಂದ ಎ.25ರಂದು ದನಗಳವು ನಡೆದಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಣಂಬೂರು ಪೊಲೀಸರು ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 3ಲಕ್ಷ ರೂ. ಮೌಲ್ಯದ ಸ್ವಿಫ್ಟ್ ಕಾರು, ದನಗಳನ್ನು ಕಡಿದು ಮಾಂಸ ಮಾಡಲು ಬಳಸಿರುವ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಪೈಕಿ ದಾವೂದ್ ಎಂಬಾತ ದನ ಕಳೆದುಕೊಂಡ ಮಹಾಬಲ ಪೂಜಾರಿಯವರ ನೆರೆಮನೆಯ ನಿವಾಸಿ. ಈತ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿ ದನವನ್ನು ಹಟ್ಟಿಯಿಂದ ಕಳವುಗೈದಿದ್ದ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kshetra Samachara
02/05/2022 10:30 pm