ವಿಟ್ಲ: ಯುವಕನೊಬ್ಬನ ಕಿರುಕುಳಕ್ಕೆ ಮನನೊಂದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ದಲಿತ್ ಸೇವಾ ಸಮಿತಿ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.
ಕಣಿಯೂರು ನಿವಾಸಿ ಸಾಹುಲ್ ಹಮೀದ್ ಎಂಬಾತ ಅಪ್ರಾಪ್ತ ಬಾಲಕಿಗೆ ನಿರಂತರ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಈ ಸಂದರ್ಭದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಮಾಜಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು, ಮಹಿಳಾ ಉಪಾಧ್ಯಕ್ಷೆ ವಿಮಲ ಸೀಗೆಬಲ್ಲೆ, ಮಾಜಿ ಅಧ್ಯಕ್ಷ ಗಣೇಶ್ ಸೀಗೆಬಲ್ಲೆ, ಸದಸ್ಯ ಶ್ರೀದೇವಿ ಮಜಿ, ಉಪಸ್ಥಿತರಿದ್ದರು.
Kshetra Samachara
05/05/2022 08:31 pm