ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಕಾಯಿಲೆಗಳಿಂದ ಬಳಲುತ್ತಿದ್ದ ವಯೋವೃದ್ಧ ನೇಣಿಗೆ ಶರಣು!

ಬ್ರಹ್ಮಾವರ : ಕಾಯಿಲೆಗಳಿಂದ ಬೇಸತ್ತು 92 ವರ್ಷ ಪ್ರಾಯದ ಹಿರಿಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೇರ್ಕಾಡಿ ಗ್ರಾಮದ ದೂಪದಕಟ್ಟೆ ಎಂಬಲ್ಲಿಂದ ಸಂಭವಿಸಿದೆ.

ಮೃತರನ್ನು ದೂಪದಕಟ್ಟೆಯ ನಾರಾಯಣ ಶೆಟ್ಟಿಗಾರ್ (92) ಎಂದು ಗುರುತಿಸಲಾಗಿದೆ. 10 ವರ್ಷಗಳ ಹಿಂದೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದ ಇವರು ಇತ್ತೀಚೆಗೆ ಜ್ವರ ಹಾಗೂ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜಿಗುಪ್ಪೆಗೊಂಡು ನಿನ್ನೆ ಮಧ್ಯಾಹ್ನದ ವೇಳೆ ಮನೆಯ ಎದುರಿನ ಮಾವಿನಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

06/05/2022 03:38 pm

Cinque Terre

9.07 K

Cinque Terre

0

ಸಂಬಂಧಿತ ಸುದ್ದಿ