ವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. 10ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟಣೆಗೆ ಸಾಹುಲ್ ಹಮೀದ್ ಯಾನೆ ಕುಟ್ಟ ಎಂಬಾತನು ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡುವುದಾಗಿ ಆರೋಪಿಸಿ ದೂರು ನೀಡಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದ ತನಿಖೆ ಮುಂದುವರೆಸಿದ ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ ಅವರ ನೇತೃತ್ವದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಯಾನೆ ಕುಟ್ಟ ಎಂಬಾತನ ಪತ್ತೆಗೆ ಎರಡು ತಂಡಗಳನ್ನು ರಚಿಸಿ ಪತ್ತೆಗೆ ಬಲೆ ಬೀಸಿದ್ದರು. ಗುರುವಾರ ರಾತ್ರಿ ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿ ವಶಕ್ಕೆ ಪಡೆಯಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಋಷಿಕೇಶ್ ಭಗವಾನ ಸೋನಾವಣೆ ಮತ್ತು ಅಡಿಷನಲ್ ಎಸ್ಪಿ ಕುಮಾರಚಂದ್ರ ಅವರ ಮಾರ್ಗದರ್ಶನ, ಬಂಟ್ವಾಳ ಉಪವಿಭಾಗದ ಎಎಸ್ಪಿ ಶಿವಾಂಶು ರಜಪೂತ ನೇತೃತ್ವದಲ್ಲಿ ವಿಟ್ಲ ಪೊಲೀಸ್ ಇನ್ ಸ್ಪೆಕ್ಟರ್ ನಾಗರಾಜ್ ಹೆಚ್ ಈ ಎಸೈಗಳಾದ ಸಂದೀಪಕುಮಾರ್ ಶೆಟ್ಟಿ ಮಂಜುನಾಥ ಟಿ ಸಿಬ್ಬಂದಿಗಳಾದ ಡ್ಯಾನಿ ಪ್ರಾನ್ಸಿಸ್ ತಾವ್ರೂ ,ಪ್ರಸನ್ ,ಸೀತಾರಾಮ ಹೇಮರಾಜ,ಅಶೋಕ್,ಶ್ರೀಧರ ,ಕುಮಾರ ,ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್ಕುಮಾರ್ ,ದಿವಾಕರರವರು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
Kshetra Samachara
06/05/2022 06:50 pm