ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ : 77 ವರ್ಷದ ಒಂಟಿ ವೃದ್ಧ ಆತ್ಮಹತ್ಯೆಗೆ ಶರಣು

ಕಾರ್ಕಳ: ಒಬ್ಬಂಟಿಯಾಗಿ ವಾಸವಿದ್ದ ಜೇಮ್ಸ್ ಗೋರಿಯಸ್ (77) ಎಂಬವರು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ

ಮಿಯಾರು ಗ್ರಾಮದ ಅರ್ಪದೆ ಎಂಬಲ್ಲಿ ನಡೆದಿದೆ. ಅವರು ಮನೆಯ ಹಿಂಬದಿ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಪತ್ನಿ ಮತ್ತು ಪುತ್ರಿ ಬೆಂಗಳೂರಿನಲ್ಲಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

10/05/2022 01:50 pm

Cinque Terre

7.25 K

Cinque Terre

0