ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೃಷ್ಣಮಠದಲ್ಲಿ ಭಕ್ತರ 6.30 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!

ಉಡುಪಿ:ಕೃಷ್ಣಮಠದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದೆ. ಬೆಂಗಳೂರಿನ ಅತ್ತಿಬೆಲೆ ಮೂಲದ ಷಣ್ಮುಗಂ ಅವರ ಕುಟುಂಬ, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ನಂತರ ಕೃಷ್ಣಮಠದ ವಸಂತ ಮಂಟಪದ ಬಳಿ ತೊಟ್ಟಿಲು ಸೇವೆ ವೀಕ್ಷಿಸುತ್ತಿದ್ದರು.

ಈ ವೇಳೆ ದೇವರ ಆರತಿ ಪಡೆಯುವಾಗ ಕಳ್ಳರು ಷಣ್ಮುಗಂ ಅವರ ಹೆಂಡತಿಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣದ ಬಾಕ್ಸ್‌ ನ್ನು ಕಳವು ಮಾಡಿದ್ದಾರೆ. ಬಾಕ್ಸ್‌ ನಲ್ಲಿ 58 ಗ್ರಾಂ ತೂಕದ ಬಳೆಗಳು, 2.16 ಗ್ರಾಂ ತೂಕದ ಕಿವಿಯೋಲೆ, 2, 13 ಗ್ರಾಂ ತೂಕದ ಮಗುವಿನ ಚಿಕ್ಕ ಬಳೆ, 1.20 ಗ್ರಾಂ ತೂಕದ ಪೆಂಡೆಂಟ್‌ ಇರುವ ಚಿನ್ನದ ಸರ, 1, 48 ಗ್ರಾಂ ತೂಕದ ದೊಡ್ಡ ಚಿನ್ನದ ಸರ1 ಹೀಗೆ ಒಟ್ಟು 155 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ. ಒಟ್ಟು ಅಂದಾಜು 6,30,000 ಮೌಲ್ಯದ ರೂಪಾಯಿ ಭಿನ್ನಾಭರಣ ಕಳವಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

14/05/2022 01:13 pm

Cinque Terre

15.05 K

Cinque Terre

1

ಸಂಬಂಧಿತ ಸುದ್ದಿ