ವಿಟ್ಲ: ಕೇಪು ಗ್ರಾಮದ ಮೈರ ಎಂಬಲ್ಲಿ ನಡೆದ ಇಬ್ಬರು ಯುವಕರಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷೀತ್ ಕುಮಾರ್ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಸೋಮವಾರ ಪೇಟೆ ನಿವಾಸಿ ಕೆ. ಮಹಮ್ಮದ್ ಶರೀಫ್ (33), ವಿಟ್ಲದ ಉಕ್ಕುಡ ದರ್ಬೆ ನಿವಾಸಿ ಸಾದಿಕ್ (20) ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಎಸ್ಪಿ ಅವರು ತಿಳಿಸಿದ್ದಾರೆ.
Kshetra Samachara
17/05/2022 07:53 pm