ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ ಮೂವರ ಬಂಧನ

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ಬಂಟ್ವಾಳ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸಿದ್ದಿಕ್(27) ಅಕ್ಬರ್(22) ಹಾಗೂ ಸಮೀರ್ (23) ಬಂಧಿತ ಆರೋಪಿಗಳು. ಬಂಟ್ವಾಳ ಕಸ್ಬಾ ಗ್ರಾಮದ ಮಣಿಹಳ್ಳದ ಮುಖೇಶ್ ಎಂಬವರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 1 ಲಕ್ಷ ರೂ. ಮೌಲ್ಯದ ಬೈಕ್ ಕಳ್ಳತವಾಗಿತ್ತು. ಇನ್ನು ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ರೈಲ್ವೇ ಸ್ಟೇಷನ್ ಬಳಿ ನಿಲ್ಲಿಸಿದ್ದ ರೈಲ್ವೇ ಇಲಾಖೆಯ ಸಿಬ್ಬಂದಿ ಅನೂಫ್ ಎಂಬುವರ ಬೈಕ್ ಕಳವಾಗಿತ್ತು. ಈ ಎರಡೂ ಬೈಕ್‌ಗಳನ್ನು ಆರೋಪಿಗಳು ಕದ್ದಿದ್ದಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೃತ್ಯಕ್ಕೆ ಉಪಯೋಗಿಸಿದ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ. ಸಹಾಯಕ ಪೊಲೀಸ್ ಅಧೀಕ್ಷಕರು ಶಿವಾಂಸು ರಜಪೂತ್ ಮತ್ತು ಪೊಲೀಸ್ ನಿರೀಕ್ಷಕರಾದ ವಿವೇಕಾನಂದ ನಿರ್ದೇಶನದಂತೆ ಪಿಎಸ್ಐಗಳಾದ ಅವಿನಾಶ್ ಮತ್ತು ಕಲೈಮಾರ್ ನೇತೃತ್ವದಲ್ಲಿ ವಿಶೇಷ ತಂಡದ ಸಿಬ್ಬಂದಿ ನಾರಾಯಣ, ಇರ್ಷಾದ್ ಪಿ, ಗಣೇಶ್, ಮನೋಹರ, ಪ್ರವೀಣ್, ಮೋಹನ, ನಾಗರಾಜ್, ಹಾಗೂ ಗಣಕಯಂತ್ರ ವಿಭಾಗದ ಸಿಬ್ಬಂದಿ ಸಂಪತ್ ಮತ್ತು ದಿವಾಕರ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

18/05/2022 06:24 pm

Cinque Terre

9.13 K

Cinque Terre

0

ಸಂಬಂಧಿತ ಸುದ್ದಿ