ಮಣಿಪಾಲ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಹಿರೇಬೆಟ್ಟುವಿನ ಭಾಸ್ಕರ್ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಹಿರೇಬೆಟ್ಟುವಿನ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ, ಆರತಿ, ಪಂಚಲೋಹದ ಮುಖ, ಹಿತ್ತಾಳೆ ಸಾಮಗ್ರಿ, ಘಂಟೆ ಸೇರಿದಂತೆ ಸುಮಾರು 50 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದನು.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Kshetra Samachara
21/05/2022 04:38 pm