ಪಬ್ಲಿಕ್ ನೆಕ್ಸ್ಟ್ ಕ್ರೈಂ ಫಾಲೊಅಪ್
ಬ್ರಹ್ಮಾವರ: ಬೆಂಗಳೂರಿನಿಂದ ಉಡುಪಿಗೆ ಬಂದಿದ್ದ ಯುವ ಪ್ರೇಮಿಗಳು ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಬ್ರಹ್ಮಾವರ ತಾಲೂಕಿನ ಮಂದಾರ್ತಿ ಗ್ರಾಮದ ಸಮೀಪ ಇವರಿಬ್ಬರ ಮೃತದೇಹ ಇವತ್ತು ಪತ್ತೆಯಾಗುತ್ತು. ಯಶವಂತ ಯಾದವ ಮತ್ತು ಜ್ಯೋತಿ ಆತ್ಮಹತ್ಯೆಗೆ ಶರಣಾದ ಜೋಡಿಯಾಗಿದ್ದಾರೆ.ಈ ಜೋಡಿ ಮೂರು ದಿನಗಳ ಹಿಂದಷ್ಟೇ ಮಂಗಳೂರಿನಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ವಿಷಯ ಬೆಳಕಿಗೆ ಬಂದಿದೆ.
ಇದೀಗ ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದ ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ.
ಬ್ರಹ್ಮಾವರ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದಾರೆ.ಸದ್ಯ ಇವರಿಬ್ಬರ ಶವವನ್ನು ಮಣಿಪಾಲ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇಡಲಾಗಿದೆ.
ಬೆಂಗಳೂರಿನ ಬಂದಿದ್ದ ಪ್ರೇಮಿಗಳು
ಯಶವಂತ ಯಾದವ್, ಜ್ಯೋತಿ ಬೆಂಗಳೂರಿನಲ್ಲಿ ಮಿಸ್ಸಿಂಗ್ ಆಗಿದ್ದರು.ಅಲ್ಲಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಗಿತ್ತು.ಮೂರು ದಿನಗಳ ಹಿಂದೆ ಮಂಗಳೂರಿಗೆ ಆಗಮಿಸಿದ್ದ ಇವರು ಅಲ್ಲಿ ಬಾಡಿಗೆ ಮನೆ ಹಿಡಿದಿದ್ದ ಮಾಹಿತಿ ಲಭ್ಯವಾಗಿದೆ.ಇಂದು ಮುಂಜಾನೆ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಜೋಡಿಗಳುಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.ಇಬ್ಬರ ಮೃತದೇಹಗಳು ತಬ್ಬಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಮಂಗಳೂರಿನಿಂದ 5000 ಪಾವತಿಸಿ ಬಾಡಿಗೆ ಕಾರು ಪಡೆದಿದ್ದರು.ಆನ್ ಲೈನ್ ಮೂಲಕ ಕಾರ್ ಬುಕ್ ಮಾಡಿದ್ದ ಜೋಡಿ ,ಅದೇ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದರೊಂದಿಗೆ ಬದುಕಿನ ಪಯಣ ಮುಗಿಸಿದ್ದಾರೆ.
PublicNext
22/05/2022 04:26 pm