ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಕಾರು ಚಾಲಕನ ಹುಚ್ಚಾಟಕ್ಕೆ ಬೆದರಿ ರಕ್ಷಣೆಗಾಗಿ ಕಣ್ಣೀರಿಟ್ಟ ಮಹಿಳೆಯರು

ವಿಟ್ಲ: ಟ್ರಾವೆಲ್ಸ್ ಕಾರು ಚಾಲಕನೋರ್ವ ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯರು ಆತಂಕಗೊಂಡು ಕಿರುಚಾಡುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದು ಅಡ್ಡಗಟ್ಟಿ, ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.

ಮಂಗಳೂರು ಹೊರ ವಲಯದ ತೊಕ್ಕೊಟ್ಟು ಪಿಲಾರಿನ ಮಹಿಳೆಯರು ಪಣೋಲಿಬೈಲಿಗೆ ತೆರಳುವ ಹಿನ್ನೆಲೆ ಕದ್ರಿಯಿಂದ ಬಾಡಿಗೆ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಕಾರು ಚಾಲಕ ಕಾಡುಮಠ ನಿವಾಸಿ ಸಾಗರ್(26) ಎಂಬಾತ ಕಾರನ್ನು ವೇಗವಾಗಿ ಅಡ್ಡಾದಿಡ್ಡಿಯಾಗಿ ಓಡಿಸಿದ್ದು, ಗಾಬರಿಗೊಂಡ ಮಹಿಳೆಯರು ನೆರವಿಗಾಗಿ ಬೊಬ್ಬೆ ಹೊಡೆಯುತ್ತಿದ್ದ ವೇಳೆ ಸಾರ್ವಜನಿಕರು ಅಪಹರಣವೆಂದು ತಿಳಿದಿದ್ದಾರೆ. ತಕ್ಷಣವೇ ಕಾರನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Edited By : Nagesh Gaonkar
Kshetra Samachara

Kshetra Samachara

22/05/2022 05:32 pm

Cinque Terre

27.28 K

Cinque Terre

0

ಸಂಬಂಧಿತ ಸುದ್ದಿ