ಬಂಟ್ವಾಳ: ಮನೆಯ ಮುಂಬಾಗಿಲು ಮುರಿದು ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಬಂಗಾರವನ್ನು ಕಳ್ಳತನ ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ.
ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ಕರಿಯ ಮೂಲ್ಯ ಅವರ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ನಡೆದಿದೆ. ಮಗಳು ಶ್ವೇತಾ ಅವರ ಮದುವೆ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಕಾರಣ ಸುಮಾರು 9 ಪವನ್ ತೂಕದ ಕಿವಿಯೊಲೆ, ಕುತ್ತಿಗೆ ಚೈನ್, ಸೇರಿದಂತೆ ಇನ್ನೂ ಕೆಲವು ಚಿನ್ನದಿಂದ ಮಾಡಿದ ಸೊತ್ತುಗಳನ್ನು ಮನೆಯ ಕಪಾಟಿನಲ್ಲಿ ಇರಿಸಿದ್ದರು. ಮನೆಗೆ ಬೀಗ ಹಾಕಿ ಸಂಬಂಧಿ ಕರ ಮನೆಗೆ ಹೋದ ಕರಿಯ ಮೂಲ್ಯ ಅವರ ಕುಟುಂಬ ಸಂಜೆ ಬಂದು ನೋಡುವಾಗ ಮುಂಬಾಗಿಲು ಮರಿದ ಸ್ಥಿತಿಯಲ್ಲಿತ್ತು. ಮನೆಯೊಳಗೆ ಹೋಗಿ ನೋಡಿದಾಗ ಕಪಾಟಿನ ಬೀಗ ಮುರಿದು ಅದರಲ್ಲಿ ಇರಿಸಿದ್ದಚಿನ್ನ ಕಳವು ಮಾಡಿದ ಬಗ್ಗೆ ತಿಳಿದು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
25/05/2022 04:44 pm