ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೊಕ್ಕೊಟ್ಟು: ಜೀವನದಲ್ಲಿ ಜಿಗುಪ್ಸೆ- ವ್ಯಕ್ತಿ ನೇಣಿಗೆ ಶರಣು

ಉಳ್ಳಾಲ: ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ವ್ಯಕ್ತಿಯೋರ್ವ ಮನೆ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ.

ತೊಕ್ಕೊಟ್ಟು, ಕಾಪಿಕಾಡು ಎರಡನೇ ಅಡ್ಡ ರಸ್ತೆ ನಿವಾಸಿ ರೋಷನ್ ಬೇಕಲ್(46) ಆತ್ಮ ಹತ್ಯೆಗೈದ ದುರ್ದೈವಿ. ರೋಷನ್ ವಿಚ್ಛೇದಿತರಾಗಿದ್ದು ಕಳೆದ ಕೆಲ ವರ್ಷಗಳಿಂದ ಖಿನ್ನತೆಗೆ ಹಾಗೂ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ರೋಷನ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ರೋಷನ್ ಅವರು ಉತ್ತಮ ಕ್ರಿಕೆಟ್ ಆಟಗಾರರಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಚಿತರಾಗಿದ್ದರು. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

28/05/2022 12:20 pm

Cinque Terre

4.71 K

Cinque Terre

0

ಸಂಬಂಧಿತ ಸುದ್ದಿ