ಮಂಗಳೂರು: ನಗರದ ಮಂಗಳೂರು ಇಂಟರ್ ನ್ಯಾಶನಲ್ ಏರ್ಪೋಟ್ ನಲ್ಲಿ ಅಕ್ರಮ ಸಾಗಾಟದ 29.12 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಭಟ್ಕಳ ಮೂಲದ ಪ್ರಯಾಣಿಕ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆ ಮಾಡಿದಾಗ 24 ಕ್ಯಾರೆಟ್ ನ 560 ಗ್ರಾಂ ತೂಕದ 29.12 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನ ಪತ್ತೆಯಾಗಿದೆ.
ಈತ ಚಿನ್ನವನ್ನು ಪೇಸ್ಟ್ ನೊಳಗೆ ಅಡಗಿಸಿಟ್ಟಿದ್ದ. ಅದನ್ನು ಗುದದ್ವಾರದೊಳಗೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. ತಕ್ಷಣ ಚಿನ್ನ ಸಹಿತ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
Kshetra Samachara
29/05/2022 09:40 am