ವಿಟ್ಲ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ವಿಟ್ಲ ಪೊಲೀಸರು ಪತ್ತೆ ಹಚ್ಚಿದ್ದು, ಒಬ್ಬ ಆರೋಪಿ ಮತ್ತು ಸ್ವತ್ತುಗಳನ್ನು ವಶಕ್ಕೆ ಪಡೆದ ಘಟನೆ ಬೋಳಂತೂರು ಗ್ರಾಮದ ಎನ್.ಸಿ ರೋಡ್ ಎಂಬಲ್ಲಿ ನಡೆದಿದೆ.
ಲಾರಿ ಚಾಲಕ ಮಡಿಕೇರಿ ಮೂಲದ ಚಂದ್ರೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿಗೆ ಲಾರಿಯಲ್ಲಿ ಸುಮಾರು 15 ಟನ್ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಆರೋಪಿ ಮತ್ತು 313 ಗೋಣಿಗಳ 15 ಟನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪ್ರಭಾರ ಆಹಾರ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರು ಠಾಣೆಗೆ ದೂರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
02/06/2022 08:02 pm