ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್ ಕಳ್ಳರು ಅಂದರ್

ಮಂಗಳೂರು : ಮಂಗಳೂರು ನಗರದ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದನ್ನು ಎಗರಿಸಿದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿ ಬೈಕ್ ವಶಕ್ಕೆ ಪಡೆದಿದ್ದಾರೆ.

ಕಾಸರಗೋಡಿನ ಚೆರ್ಕಳ ನಿವಾಸಿ ಅಬ್ದುಲ್ ರಶೀದ್ ಕುಂಜಾರುಪ್ಪಾರ ನಿವಾಸಿ ಅಬ್ದುಲ್ ಶಬೀರ್, ಬಂಧಿತ ಆರೋಪಿಗಳು. ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ಬಗಂಬಿಲ ನಿವಾಸಿ ರಂಜಿತ್ ಎಂಬವರ ಎಫ್ ಝಡ್ ಬೈಕ್ ಕಳವು ನಡೆದಿತ್ತು. ಈ ಕುರಿತು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಉಚ್ಚಿಲ ಬ್ರಿಡ್ಜ್ ಬಳಿ ಉಳ್ಳಾಲ ಠಾಣಾ ಪಿಎಸ್ ಐ ಪ್ರದೀಪ್ ಟಿ.ಆರ್ ಮತ್ತು ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿರುವಾಗ ಬೈಕ್ ಪತ್ತೆಯಾಗಿದೆ. ಮುಂಭಾಗದಲ್ಲಿ ನಂಬರ್ ಪ್ಲೇಟ್ ಇಲ್ಲದೇ ತೆರಳುತ್ತಿರುವುದನ್ನು ಗಮನಿಸಿ ಸಂಶಯಗೊಂಡು ಬೈಕನ್ನು ತಡೆದು ದಾಖಲೆಗಳ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಇಬ್ಬರು ಕಳವು ನಡೆಸಿದ ಬೈಕನ್ನು ಕೆಲಕಾಲ ಉಪಯೋಗಿಸಿ ನಂತರ ಮಾರಾಟ ಮಾಡುವ ಯೋಚನೆಯಲ್ಲಿದ್ದರೆಂದು ತನಿಖೆಯಲ್ಲಿ ತಿಳಿದುಬಂದಿದೆ.

Edited By : Nirmala Aralikatti
Kshetra Samachara

Kshetra Samachara

03/06/2022 07:03 pm

Cinque Terre

6.4 K

Cinque Terre

3

ಸಂಬಂಧಿತ ಸುದ್ದಿ