ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು : ಕಾರ್ತಿಕ್‌ ಮೇರ್ಲ ಕೊಲೆ ಪ್ರಕರಣದ ಓರ್ವ ಆರೋಪಿಯನ್ನು ಹತ್ಯೆಗೈದ ದುಷ್ಕರ್ಮಿಗಳು!

ಪುತ್ತೂರು: ಮೂರು ವರ್ಷಗಳ ಹಿಂದೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಆರ್ಯಾಪು ನಿವಾಸಿ ಚರಣ್ ರಾಜ್ ರೈ(28) ನನ್ನು ಪೆರ್ಲಂಪಾಡಿ ಬಳಿ ಶನಿವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

2019 ಸೆ.3 ರಂದು ರಾತ್ರಿ ಸಂಪ್ಯದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬಳಿ ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮೇರ್ಲ (27) ರವರನ್ನು ಪುತ್ತೂರಿನ ಹೊರವಲಯ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚರಣ್ ರಾಜ್ ರೈ, ಕಿರಣ್ ರೈ, ಪ್ರೀತೇಶ್ ಶೆಟ್ಟಿ ಎಂಬವರನ್ನು ಬಂಧಿಸಲಾಗಿತ್ತು. ಇವರ ಪೈಕಿ ಚರಣ್ ರಾಜ್ ರೈನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಚರಣ್ ರಾಜ್ ರೈ ರವರ ಮೆಡಿಕಲ್ ಶಾಪ್ ನಾಳೆ ಪೆರ್ಲಂಪಾಡಿಯಲ್ಲಿ ಆರಂಭಗೊಳ್ಳಲಿದ್ದು, ಈ ಹಿನ್ನೆಲೆ ಕೆಲಸ ನಿರ್ವಹಿಸುತ್ತಿದ್ದ ವೇಳೆ, ದ್ವಿಚಕ್ರ ವಾಹನಗಳಲ್ಲಿ ಬಂದು ತಲ್ವಾರಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Edited By : Shivu K
PublicNext

PublicNext

04/06/2022 07:50 pm

Cinque Terre

70.95 K

Cinque Terre

2

ಸಂಬಂಧಿತ ಸುದ್ದಿ